ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಭಾರತ ಸರಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಅಧೀನ ಕಚೇರಿಗಳಲ್ಲಿ ಖಾಲಿ ಇರುವ 121 ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ /ಅಪ್ಪರ್ ಡಿವಿಷನ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 21-02-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆಫ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
“The Regional Director, Staff Selection
Commission (Northern Region),
Block No.12, C.G.O. Complex,
Lodhi Road, New Delhi-110003”
ಹುದ್ದೆಗಳ ವಿವರ :
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಲೋವರ್ ಡಿವಿಷನ್ ಕ್ಲರ್ಕ್ : 52
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ /ಅಪ್ಪರ್ ಡಿವಿಷನ್ ಕ್ಲರ್ಕ್ : 69
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments