ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ದಲ್ಲಿ ಖಾಲಿ ಇರುವ 4300 ಸಬ್ ಇನ್ಸ್ ಪೆಕ್ಟರ್ ಭರ್ಜರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC)ದಲ್ಲಿ ಖಾಲಿ ಇರುವ4300 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ಒಟ್ಟು ಹುದ್ದೆಯ ವಿವರಗಳು
ಸಬ್-ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) 340
ಸಬ್-ಇನ್ಸ್‌ಪೆಕ್ಟರ್ (ಜಿಡಿ) 3960
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ/ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಎಲ್ಲಾ ಇತರ ಅಭ್ಯರ್ಥಿಗಳು: ರೂ.100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಮಹಿಳೆಯರು/SC/ST/ESM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ
ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 01-ಜನವರಿ-2022 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
OBC/ ESM ಸೈನಿಕ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,400/- ರಿಂದ 1,12,400/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments