ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 146 ಅಟೆಂಡೆಂಟ್ ಕಮ್ ಟೆಕ್ನಿಷಿಯನ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳಿಗೂ ಅವಕಾಶವನ್ನು ಅಲ್ಪಿಸಲಾಗಿದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ S.S.L.C (10th)ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
* Apprenticeship ತರಬೇತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಾಮಾನ್ಯವರ್ಗ, OBC, EWS ಅಭ್ಯರ್ಥಿಗಳಿಗೆ 200/- ರೂ
* SC/ ST/ PwD/ ESM & Departmental ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments