ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 51 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 18/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿMBA/ PG/ CA/ CMA/ ಮತ್ತು ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಟ 60% ಅಂಕಗಳೊಂದಿಗೆ ಪಾಸಾಗಿರಬೇಕು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ರೂ 700/- ಅರ್ಜಿ ಶುಲ್ಕವನ್ನು ಪಾವತಿಸಬೇಕು
SC/ST ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 50,000- 1,60,000/- ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments