ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 107 ಕೋರ್ಟ್ ಮಾಸ್ಟರ್, ಹಿರಿಯ ವೈಯಕ್ತಿಕ ಸಹಾಯಕ ಮತ್ತು ವೈಯಕ್ತಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪ್ರಾರಂಭ ದಿನಾಂಕ 04 ಡಿಸೆಂಬರ್ 2024 ಹಾಗೂ ಕೊನೆಯ ದಿನಾಂಕ 25 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 107
ಕೋರ್ಟ್ ಮಾಸ್ಟರ್ : 31
ಹಿರಿಯ ವೈಯಕ್ತಿಕ ಸಹಾಯಕ : 33
ವೈಯಕ್ತಿಕ ಸಹಾಯಕ : 43
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಇತರೆ ಅಭ್ಯರ್ಥಿಗಳಿಗೆ ಶುಲ್ಕ: ರೂ. 1000/-
ಎಸ್‌ಸಿ/ಎಸ್‌ಟಿ/ದೈಹಿಕವಾಗಿ ಅಶಕ್ತರು/ಮಾಜಿ ಸೈನಿಕರು/ ವಿಧವೆ/ವಿಚ್ಛೇದಿತ ಮಹಿಳೆಯರು/ ನ್ಯಾಯಾಂಗವಾಗಿ ಬೇರ್ಪಟ್ಟ ಮಹಿಳೆಯರು ರೂ. 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
1. Court Master (Shorthand): 30 to 45 ವರ್ಷ
2. Senior Personal Assistant: 18 to 30 ವರ್ಷ
3. Personal Assistant: 18 to 30 ವರ್ಷ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
1. Court Master (Shorthand) : Rs. 67,700/-
2. Senior Personal Assistant : Rs. 47,600/-
3. Personal Assistant : Rs. 44,900/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments