ಭಾರತೀಯ ರೈಲ್ವೆ ಇಲಾಖೆಯ ನೈರುತ್ಯ ರೈಲ್ವೆ ವಿಭಾಗದಲ್ಲಿಖಾಲಿ ಇರುವ ಒಟ್ಟು 386 ಟಿಕೆಟ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:3 ನವೆಂಬರ್ 2019

ಭಾರತೀಯ ರೈಲ್ವೆ ಇಲಾಖೆಯ ನೈರುತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಒಟ್ಟು 386 ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಮತ್ತು ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 20, 2019ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
No. of posts: 386
Application Start Date: 23 ಅಕ್ಟೋಬರ್ 2019
Application End Date: 20 ನವೆಂಬರ್ 2019
Work Location: ನೈರುತ್ಯ ರೈಲ್ವೆ ವಿಭಾಗ
Selection Procedure: ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ,ದಾಖಲೆಗಳ ಪರಿಶೀಲನೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಪದವಿ ಮತ್ತು 12ನೇ ತರಗತಿ/ದ್ವಿತೀಯ ಪಿಯುಸಿ ಅನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.





Comments