ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನಲ್ಲಿ ಖಾಲಿ ಇರುವ 170 ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ / ಸೆಕ್ರೆಟರಿಯಲ್ ಅಸಿಸ್ಟೆಂಟ್, ಅಸಿಸ್ಟೆಂಟ್, ಡ್ರಾಪ್ ಮನ್ ಮತ್ತು ಫಿಟ್ಟರ್ ಸೇರಿದಂತೆ ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/01/2024. ರ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Sr. Manager (HR-Estt.)
TIHDC India Limited
Bhagirathi Bhawan Pragatipuram,
By-Pass Road Rishikesh-249201
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 3 ವರ್ಷಗಳು
SC/ST/ PWBD ಅಭ್ಯರ್ಥಿಗಳಿಗೆ : 5 ವರ್ಷಗಳು ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments