ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನಲ್ಲಿ ಖಾಲಿ ಇರುವ 55 ಮ್ಯಾನೇಜರ್, ಸಹಾಯಕ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮತ್ತು ಹಿರಿಯ ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಆಗಸ್ಟ್ 2024ರ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 55
ಮ್ಯಾನೇಜರ್ - 25
ಸಹಾಯಕ ವ್ಯವಸ್ಥಾಪಕ - 19
ಉಪ ವ್ಯವಸ್ಥಾಪಕ - 3
ಹಿರಿಯ ವ್ಯವಸ್ಥಾಪಕ - 3
ಹಿರಿಯ ವೈದ್ಯಕೀಯ ಅಧಿಕಾರಿ - 5
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ M.Tech/ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 600/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ST/ PWBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 48 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 3 ವರ್ಷಗಳು
SC/ST/ PWBD ಅಭ್ಯರ್ಥಿಗಳಿಗೆ : 5 ವರ್ಷಗಳು ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ60,000/- ರಿಂದ 2,40,000/- ರೂಗಳವರೆಗೆ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments