ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ.,ಜಯನಗರ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಜಯನಗರ ಬೆಂಗಳೂರು ಇಲ್ಲಿ ಖಾಲಿ ಇರುವ 22 ಹಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಮ್ಯಾನೇಜರ್, ಅಕೌಂಟಂಟ್, ದ್ವಿತೀಯ ದರ್ಜೆ ಸಹಾಯಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 27 ಜನೆವರಿ 2023 ಸಂಜೆ 05:00 ರೊಳಗಾಗಿ ಖುದ್ದಾಗಿ/ ಅಂಚೆ/ ಕೊರಿಯರ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ.,
ನಂ.30, 15ನೇ ಕ್ರಾಸ್, 3ನೇ ಬ್ಲಾಕ್,
ಜಯನಗರ ಬೆಂಗಳೂರು-560011.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
OBC (NCL) ಅಭ್ಯರ್ಥಿಗಳಿಗೆ : 38 ವರ್ಷಗಳು
SC/ST ಅಭ್ಯರ್ಥಿಗಳಿಗೆ : 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ24,000-56,550/- ರೂಗಳವರೆಗೆ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments