ತುಮಕೂರು ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 27 ಸಹಾಯಕ ಇಂಜಿನಿಯರ್, ತಾಂತ್ರಿಕ ಸಹಾಯಕರು, ಮತ್ತು ತಾಲೂಕು ಎಂಐಎಸ್ ಸಂಯೋಜಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ4 ಡಿಸೆಂಬರ್ 2023. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಹುದ್ದೆಗಳ ವಿವರ : 27
ತಾಲ್ಲೂಕು ಎಂಐಎಸ್ ಸಂಯೋಜಕರು - 1
ತಾಂತ್ರಿಕ ಸಹಾಯಕರ ಇಂಜಿನಿಯರೋ(ಸಿವಿಲ್) - 6
ತಾಂತ್ರಿಕ ಸಹಾಯಕರು (ಕೃಷಿ) - 10
ತಾಂತ್ರಿಕ ಸಹಾಯಕರು (ತೋಟಗಾರಿಕ) - 3
ತಾಂತ್ರಿಕ ಸಹಾಯಕರು (ಅರಣ್ಯ) - 4
ತಾಂತ್ರಿಕ ಸಹಾಯಕರು (ರೇಷ್ಮೆ - 3
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E., Computer Science,BCA / MCA, MSc, BSc, M.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 28,000/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ. ಜೊತೆಗೆ ಪ್ರಯಾಣ ಭತ್ಯ 2000/- ರೂ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ





Comments