ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ 15 ಸಹಾಯಕ ಪ್ರಾಧ್ಯಾಪಕರು,ಕೃಷಿ ಅರ್ಥಶಾಸ್ತ್ರ, ಕೃಷಿ ಮಾರುಕಟ್ಟೆ ಸಹಕಾರ, ಕೃಷಿ ಸೂಕ್ಷ್ಮ ಜೀವವಿಜ್ಞಾನ ಮತ್ತು ದೈಹಿಕ ಶಿಕ್ಷಣ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ 24/4/2023 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
THE ADMINISTRATIVE OFFICER,
UNIVERSITY OF AGRICULTURAL SCIENCES, GKVK, BENGALURU - 560 065.
ಹುದ್ದೆಗಳ ವಿವರ : 15
ಕೃಷಿ ಅರ್ಥಶಾಸ್ತ್ರ : 02
ಕೃಷಿ ಕೀಟಶಾಸ್ತ್ರ : 02
ಕೃಷಿ ಮಾರುಕಟ್ಟೆ ಸಹಕಾರ : 02
ಕೃಷಿ ಸೂಕ್ಷ್ಮ ಜೀವವಿಜ್ಞಾನ : 02
ಕೃಷಿಶಾಸ್ತ್ರ : 02
ಜೆನೆಟಿಕ್ಸ್ & ಪ್ಲಾಂಟ್ ಬ್ರೀಡಿಂಗ್ : 02
ದೈಹಿಕ ಶಿಕ್ಷಣ : 01
ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ : 02
* ಸಾಮಾನ್ಯ ಅಭ್ಯರ್ಥಿಗಳು ಮತ್ತು OBC ಅಭ್ಯರ್ಥಿಗಳು 2000/-ರೂ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.
* ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸ್ವೀಕರಿಸಲು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
ಎ) OBC ಅಭ್ಯರ್ಥಿಗಳಿಗೆ 3 ವರ್ಷ.
ಬಿ) SC / ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 57,700/- ರಿಂದ 1,82,400/- ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments