Loading..!

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Tags: Degree
Published by: Yallamma G | Date:29 ಡಿಸೆಂಬರ್ 2022
not found

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ ವಿಜಯಪುರದಲ್ಲಿ ಖಾಲಿ ಇರುವ ಫೀಲ್ಡ್ ಅಸಿಸ್ಟಂಟ್ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂದರ್ಶನ ನಡೆಯುವ ದಿನಾಂಕದಂದು ಅರ್ಜಿಯನ್ನು ಸಲ್ಲಿಸಬಹುದು.ಯಾವುದೇ ಕಾರಣಕ್ಕೂ ಅರ್ಜಿಗಳನ್ನು ಮುಂಗಡವಾಗಿ ಕಳುಹಿಸಬಾರದು. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ06/01/2023 ಬೆಳ್ಳಿಗೆ 10:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಮೂಲ ಪ್ರತಿಳನ್ನು ಹಾಗೂ ದೃಡೀಕೃತ ನಕಲು ಪ್ರತಿಗಳನ್ನು ಮತ್ತು 2 ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿ. 


ಸಂದರ್ಶನ ನಡೆಯುವ ವಿಳಾಸ :
ಸಹ ಸಂಶೋಧನಾ ನಿರ್ದೇಶಕರು,
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ,
ವಿಜಯಪುರ.

No. of posts:  1
Application Start Date:  29 ಡಿಸೆಂಬರ್ 2022
Application End Date:  6 ಜನವರಿ 2023
Work Location:  ವಿಜಯಪುರ
Selection Procedure: ಈ ಹುದ್ದೆಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ B.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. ಕನಿಷ್ಠ 2-3 ವರ್ಷಗಳ ವೃತ್ತಿ ಅನುಭವನ್ನು ಹೊಂದಿರಬೇಕು.

Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ10,000/- ವರೆಗೆ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments