ಕೃಷಿ ವಿಶ್ವವಿದ್ಯಾಲಯ ಧಾರವಾಡ(UAS)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಧಾರವಾಡ ಪಶು ವಿಜ್ಞಾನ ವಿಭಾಗದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ 176 ದಿನಗಳ ಅವಧಿಗೆ ಮೀರದಂತೆ ತಾತ್ಕಾಲಿಕ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ10/01/2022 ರಂದು ಸಂದರ್ಶನದಲ್ಲಿ ಭಾಗವಹಿಸಬಹುದಾಗಿರುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ),
ಕೃಷಿ ಮಹಾವಿದ್ಯಾಲಯ,
ಧಾರವಾಡ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.Sc./ MV.Sc./ Ph.D in Animal Science/ Veterinary Science ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗೆ ಅಭ್ಯರ್ಥಿಗಳು 40,000/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments