ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್, ಪ್ರೋಗ್ರಾಮ್ ಅಸಿಸ್ಟಂಟ್, ಸ್ಟೆನೋಗ್ರಾಫರ್ ಮತ್ತು ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25/10/2023.
ಅರ್ಜಿ ಸಲ್ಲಿಸುವ ವಿಳಾಸ :
the Registrar, University of Agricultural Sciences,
Dharwad - 580 005(Karnataka).
ಹುದ್ದೆಗಳ ವಿವರ :
ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್ : 17
ಪ್ರೋಗ್ರಾಮ್ ಅಸಿಸ್ಟಂಟ್ : 3
ನಾನ್ ಟೆಕ್ನಿಕಲ್ ಸ್ಟಾಫ್ : 8
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 25-10-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 10-11-2023 ವರೆಗೆ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC/ PUC/ ಸ್ನಾತಕೋತ್ತರ ಪದವಿ/ B.Sc/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. ಕನಿಷ್ಠ 2-3 ವರ್ಷಗಳ ವೃತ್ತಿ ಅನುಭವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳಿಗೆ ಅರ್ಜಿ ಶುಲ್ಕ ರೂಪಾಯಿ 600
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ಕ್ಕೆ ಅಭ್ಯರ್ಥಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 300
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿದೆ.
* ಸಾಮಾನ್ಯ ವರ್ಗ : 35 ವರ್ಷ
* ಹಿಂದುಳಿದ ವರ್ಗ: 38 ವರ್ಷ
* SC ST ಹಾಗೂ CAT-1: 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments