ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ – ಈಗಲೇ ಅರ್ಜಿ ಸಲ್ಲಿಸಿ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (UAS) ಧಾರವಾಡ 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು09 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಹತೆ ಹೊಂದಿರುವ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (UAS) ಧಾರವಾಡದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 18-ಜುಲೈ-2025 ಬೆಳಿಗ್ಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿರುತ್ತದೆ. ಸಂದರ್ಶನವು ಅಸೋಸಿಯೇಟ್ ರಿಸರ್ಚ್ ಡೈರೆಕ್ಟರ್ ಕಚೇರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕದಲ್ಲಿ ನಡೆಯಲಿದೆ.
ಹುದ್ದೆಗಳ ವಿವರ : 09
Assistant Engineer (Civil) : 2
Assistant Engineer (Electrical) : 1
Junior Engineer (Civil) : 4
Junior Engineer (Electrical) : 2
ವಿದ್ಯಾರ್ಹತೆ : ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಅನುಗುಣವಾಗುವಂತೆ ಈ ಕೆಳಗಿನಂತೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
Assistant Engineer (Civil): Degree in Civil Engineering
Assistant Engineer (Electrical): Degree in Electrical Engineering
Junior Engineer (Civil): Diploma in Civil Engineering
Junior Engineer (Electrical): Diploma in Electrical Engineering
ಮಾಸಿಕ ವೇತನ : ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Assistant Engineer (Civil), Assistant Engineer (Electrical) ಹುದ್ದೆಗಳಿಗೆ : Rs.30255/-
Junior Engineer (Civil), Junior Engineer (Electrical) ಹುದ್ದೆಗಳಿಗೆ : Rs.24590/-
ವಯಸ್ಸಿನ ಮಿತಿ: ಧಾರವಾಡ ವಿಶ್ವವಿದ್ಯಾಲಯದ ಮಾನದಂಡಗಳ ಪ್ರಕಾರ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಇರಲಿದೆ
ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ನೇರ ಸಂದರ್ಶನವನ್ನು ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸಂದರ್ಶನದ ವಿವರ :
ಸ್ಥಳ : ಅಸೋಸಿಯೇಟ್ ರಿಸರ್ಚ್ ಡೈರೆಕ್ಟರ್ ಕಚೇರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ
ದಿನಾಂಕ : 18-ಜುಲೈ-2025 ಬೆಳಿಗ್ಗೆ 10:00 ಗಂಟೆಗೆ.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 03-07-2025
ವಾಕ್-ಇನ್ ದಿನಾಂಕ: 18-ಜುಲೈ-2025 ಬೆಳಿಗ್ಗೆ 10:00
Comments