ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು. ಸೇವಾ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಈ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20 ಜನವರಿ 2025 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳು ಮತ್ತು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಅಭ್ಯರ್ಥಿಗಳು ಯಾವುದೇ ಸಂದರ್ಭದಲ್ಲಿ ಅರ್ಜಿಗಳನ್ನು ಮುಂಗಡವಾಗಿ ಕಳುಹಿಸಬಾರದು.
ಸಂದರ್ಶನ ನಡೆಯುವ ಸ್ಥಳ :
ಸಂದರ್ಶನ ಕೊಠಡಿ, ಡೀನ್ (ಕೃಷಿ),
ಕೃಷಿ ವಿಶ್ವವಿದ್ಯಾಲಯ, ಧಾರವಾಡ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 25,000/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments