Loading..!

ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಸೈಂಟಿಸ್ಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:8 ಜೂನ್ 2022
not found
ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಸೈಂಟಿಸ್ಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕಾರನಾಟಕ ಭಾಗದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದು. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ, ಮುಂದಿನ ದಿನಗಳಲ್ಲಿ ಅವಧಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ30/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  11
Application Start Date:  8 ಜೂನ್ 2022
Application End Date:  30 ಜೂನ್ 2022
Work Location:  ರಾಯಚೂರು ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ 55 ಅಂಕಗಳಿಂದ ಪಾಸಾಗಿರಬೇಕು. 2009-2016 ರೊಳಗೆ UGC/ NET/ SLET/ SET ಪರೀಕ್ಷೆಯಲ್ಲಿ ಪಾಸಾಗಿಯಬೇಕು    
-ವೃತ್ತಿ ಅನುಭವವನ್ನು  ಹೊಂದಿದವರಿಗೆ ಮೊದಲ ಆದ್ಯತೆ ನಿಯಾಲಾಗುವುದು.

Fee:

* ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮೀಸಲಾತಿ ಅಭ್ಯರ್ಥಿಗಳಿಗೆ 500/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 42 ವರ್ಷ ವಯೋಮಿತಿಯನ್ನು ಮೀರಬಾರದು
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 57,000/- ರಿಂದ 1,82,400/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜೂನ್ 9, 2022, 10:53 ಅಪರಾಹ್ನ