ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:16 ಅಕ್ಟೋಬರ್ 2023

ಅಣುಶಕ್ತಿ ಇಲಾಖೆಯ ಅಧೀನದಲ್ಲಿರುವ ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (UCIL) ನಲ್ಲಿ ಖಾಲಿ ಇರುವ 243 ಫಿಟ್ಟರ್, ಎಲೆಕ್ಟ್ರಿಷನ್, ವೆಲ್ಡರ್, ಟರ್ನರ್/ಮೆಷಿನಿಸ್ಟ್, ಬಡಗಿ ಮತ್ತು ಇನ್ ಸ್ಟುಮೆಂಟ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 12-11-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 243
ಫಿಟ್ಟರ್ : 82
ಎಲೆಕ್ಟ್ರಿಷನ್ : 82
ವೆಲ್ಡರ್ : 40
ಟರ್ನರ್/ಮೆಷಿನಿಸ್ಟ್ : 12
ಇನ್ ಸ್ಟುಮೆಂಟ್ ಮೆಕ್ಯಾನಿಕ್ : 5
ಬಡಗಿ : 5
ಪ್ಲಬರ : 5
ಇತರ : 12
No. of posts: 243
Application Start Date: 16 ಅಕ್ಟೋಬರ್ 2023
Application End Date: 12 ನವೆಂಬರ್ 2023
Work Location: ಭಾರತದಾದ್ಯಂತ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ 30,000-1,20,000/- ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments