ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (UCIL) ನಲ್ಲಿ ಖಾಲಿ ಇರುವ 122 ಜನರಲ್ ಮ್ಯಾನೇಜರ್, ಫೇರ್ ಮ್ಯಾನ್, ಚೀಫ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಡೆಪ್ಯುಟಿ ಸುಪ್ರಿಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18-ಆಗಸ್ಟ-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸವ ವಿಳಾಸ :
General Manager Uranium Corporation of India Limited
P.O. Jaduguda Mines, Distt.- Singhbhum East,JHARKHAND-832 102
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ MBA/ PGPM/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 500/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ 30,000-1,20,000/- ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments