ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)ನಲ್ಲಿ ಖಾಲಿ ಇರುವ ಒಟ್ಟು 58 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ .
- ಸೂಪರ್ ವೈಸರ್, ಆಫೀಸ್ ಅಸಿಸ್ಟೆಂಟ್/ ಬೂತ್ ಆಪರೇಟರ್ಸ್ ಹುದ್ದೆಗಳಿಗೆ10/10/2023 ಅರ್ಜಿ ಸಲ್ಲಿಸುಸಲು ಕೊನೆಯ ದಿನಕವಾಗಿದೆ.
- ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ 08/10/2023 ಅರ್ಜಿ ಸಲ್ಲಿಸಲು ಕೊನೆಯ ದಿನಕವಾಗಿದೆ.
ಹುದ್ದೆಗಳ ವಿವರ : 58
ಸೂಪರ್ ವೈಸರ್ - 18
ಆಫೀಸ್ ಅಸಿಸ್ಟೆಂಟ್/ ಬೂತ್ ಆಪರೇಟರ್ಸ್ - 16
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ - 02
ಸೀನಿಯರ್ ಮ್ಯಾನೇಜರ್ - 01
ಮ್ಯಾನೇಜರ್ - 08
ಡೆಪ್ಯೂಟಿ ಮ್ಯಾನೇಜರ್ - 01
ಅಸಿಸ್ಟೆಂಟ್ ಮ್ಯಾನೇಜರ್ - 12
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ITI/ Diploma/ Engineering/ BA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC/ST ಪ್ರವರ್ಗ -1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments