ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತರು 17-01-2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೀಸಲಾತಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ :
* ಅಂಗನವಾಡಿ ಸಹಾಯಕಿ : Rs 5,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Comments