ಉಡುಪಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/10/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ06/10/2022 ರಂದು ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ,
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಿಂಭಾಗ,
ಅಜ್ಜರಕಾಡು- ಉಡುಪಿ.
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 2 ವರ್ಷ ವೃತ್ತಿ ಅನುಭವ ಹೊಂದಿರಬೇಕು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 15,697/- ರೂ. ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments