ಶಿಕ್ಷಕರಾಗಲು ಬಯಸುವವರಿಗೆ ಸಿಹಿ ಸುದ್ದಿ - UGC NET 2025 ಅಧಿಸೂಚನೆ ಪ್ರಕಟ – ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ!

UGC NET 2025 ಪರೀಕ್ಷೆಯು ಶಿಕ್ಷಕರಾಗಲು ಬಯಸುವವರಿಗೆ ಒಂದು ಸುವರ್ಣಾವಕಾಶ. ಅರ್ಹತೆ ಮಾನದಂಡಗಳಿಂದ ಹಿಡಿದು ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪರೀಕ್ಷೆಯ ಮಾದರಿ ಮತ್ತು ತಯಾರಿ ತಂತ್ರಗಳವರೆಗೂ ಎಲ್ಲಾ ವಿಷಯಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡು ತಯಾರಾಗುವುದು ಯಶಸ್ಸಿನ ಕೀಲಿ. ಯೋಗ್ಯವಾದ ಅಧ್ಯಯನ ಯೋಜನೆ ಮತ್ತು ನಿಯಮಿತ ಅಭ್ಯಾಸದೊಂದಿಗೆ ಈ ಪರೀಕ್ಷೆಯಲ್ಲಿ ಯಶಸ್ವಿಯಾಗಬಹುದು.
ಶಿಕ್ಷಕರಾಗಲು ಬಯಸುವವರಿಗೆ ಇಲ್ಲಿದೆ ಸಿಹಿ ಸುದ್ದಿ.......... ಕೇಂದ್ರದ University Grants Commission (UGC) ಮತ್ತು National Testing Agency (NTA) ಸಂಯುಕ್ತವಾಗಿ ಪ್ರಕಟಿಸಿದ UGC-NET (December 2025) ಅಧಿಸೂಚನೆ ಹೊರಬಿದ್ದಿದೆ. ಪ್ರಾಧ್ಯಾಪಕರಾಗಲು ಅಥವಾ JRF (Junior Research Fellowship) ಗೆ ಅರ್ಹತೆ ಪಡೆಯಲು ಉನ್ನತ ಶಿಕ್ಷಣಾಭ್ಯಾಸ ಹೊಂದಿರುವ ಅಭ್ಯರ್ಥಿಗಳಿಗೆ ಇದು ಮುಖ್ಯ ಅವಕಾಶ.
ವಿಶ್ವವಿದ್ಯಾಲಯ ಧನಸಹಾಯ ಆಯೋಗ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಲೆಕ್ಚರ್ ಶಿಪ್ / ಅಸಿಸ್ಟಂಟ್ ಪ್ರೊಫೆಸರ್ ಶಿಪ್ ಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ(NET) ದಿನಾಂಕ ಪ್ರಕಟಗೊಂಡಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು 2025 ನವೆಂಬರ್ 07 ಕೊನೆಯ ದಿನವಾಗಿದೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ(NTA) ನಡೆಸಲಿದೆ. ಈ ಪರೀಕ್ಷೆ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ನೀಡಲಾಗುತ್ತದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯ ಭೋದಿಸುವ ಉಪನ್ಯಾಸಕರಿಗೆ, ಸಹಾಯಕ ಪ್ರಾಧ್ಯಾಪಕರಿಗೆ ಅರ್ಹತೆ ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳು ಜೆ ಆರ್ ಎಫ್ ಮತ್ತು ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಎರಡಕ್ಕೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯಲ್ಲಿ ತಮ್ಮ ಆದ್ಯತೆಯನ್ನು ತಿಳಿಸಬೇಕಾಗುತ್ತದೆ. ಫಲಿತಾಂಶ ಪ್ರಕಟಿಸುವಾಗಲೇ ಎರಡಕ್ಕೂ ಪ್ರತ್ಯೇಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. JRF ಅರ್ಹತೆ ಪಡೆದರು ಉನ್ನತ ವಿದ್ಯಾಭ್ಯಾಸ ಅಥವಾ ಸಂಶೋಧನೆಗಾಗಿ ದೇಶದ ವಿವಿಧ ವಿಶ್ವವಿದ್ಯಾಲಯ, ಸಂಶೋಧನಾ ಸಂಸ್ಥೆಗಳನ್ನು ಸೇರಬಹುದು.
ಈ ಅರ್ಹತಾ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯಾಗಿರುತ್ತದೆ. ಅಭ್ಯರ್ಥಿಗಳನ್ನು CBT ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು.
Comments