UGC ನೆಟ್ ಎಕ್ಸಾಮ್ ಗೆ 2025 ನೇ ಸಾಲಿನ ಅಧಿಸೂಚನೆ ಪ್ರಕಟವಾಗಿದ್ದು ಈ ಅಧಿಸೂಚನೆ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ವಿಶ್ವವಿದ್ಯಾಲಯ ಧನಸಹಾಯ ಆಯೋಗ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಲೆಕ್ಚರ್ ಶಿಪ್ / ಅಸಿಸ್ಟಂಟ್ ಪ್ರೊಫೆಸರ್ ಶಿಪ್ ಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ(NET) ದಿನಾಂಕ ಪ್ರಕಟಗೊಂಡಿದೆ. ಬರುವ 2025 ಜೂನ್ 21 ರಿಂದ 30 ರವರೆಗೆ ಪರೀಕ್ಷೆ ನಡೆಯಲಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು 2025 ಮೇ 08 ಕೊನೆಯ ದಿನವಾಗಿದೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ(NTA) ನಡೆಸಲಿದೆ. ಈ ಪರೀಕ್ಷೆ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ನೀಡಲಾಗುತ್ತದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯ ಭೋದಿಸುವ ಉಪನ್ಯಾಸಕರಿಗೆ, ಸಹಾಯಕ ಪ್ರಾಧ್ಯಾಪಕರಿಗೆ ಅರ್ಹತೆ ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳು ಜೆ ಆರ್ ಎಫ್ ಮತ್ತು ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಎರಡಕ್ಕೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯಲ್ಲಿ ತಮ್ಮ ಆದ್ಯತೆಯನ್ನು ತಿಳಿಸಬೇಕಾಗುತ್ತದೆ. ಫಲಿತಾಂಶ ಪ್ರಕಟಿಸುವಾಗಲೇ ಎರಡಕ್ಕೂ ಪ್ರತ್ಯೇಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. JRF ಅರ್ಹತೆ ಪಡೆದರು ಉನ್ನತ ವಿದ್ಯಾಭ್ಯಾಸ ಅಥವಾ ಸಂಶೋಧನೆಗಾಗಿ ದೇಶದ ವಿವಿಧ ವಿಶ್ವವಿದ್ಯಾಲಯ, ಸಂಶೋಧನಾ ಸಂಸ್ಥೆಗಳನ್ನು ಸೇರಬಹುದು.
ಈ ಅರ್ಹತಾ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯಾಗಿರುತ್ತದೆ. ಅಭ್ಯರ್ಥಿಗಳನ್ನು CBT ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು.
ವಿದ್ಯಾರ್ಹತೆ : ನಿಗದಿತ ಸ್ನಾತಕೋತ್ತರ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕ ಪಡೆದ SC/ST/OBC ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಈಗಾಗಲೇ ಸ್ನಾತಕೋತ್ತರ ಪದವಿಗೆ ಸೇರ್ಪಡೆಗೊಂಡರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ :
UGC-NET ಪರೀಕ್ಷೆಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು 1150ರೂ.
- ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ಮತ್ತು
- SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 325 ರೂ. ಶುಲ್ಕ ನಿಗದಿಪಡಿಸಲಾಗಿದೆ. ಆನ್ ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ.
ವಯೋಮಿತಿ :
ಗರಿಷ್ಟ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು : ಬಳ್ಳಾರಿ, ಬೆಳಗಾವಿ, ಬೆಂಗಳೂರು, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಹಾಸನ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ಉಡುಪಿ.
Comments