ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ UIIC ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್(UIIC) ನಲ್ಲಿ ಖಾಲಿ ಇರುವ 300 ಅಸಿಸ್ಟೆಂಟ್ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ16/12/2023, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06/01/2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ, ಹಿಂದುಳಿದ ವರ್ಗದ (2A/2B/3A/3B ಅಭ್ಯರ್ಥಿಗಳಿಗೆ ರೂ 500/-
* SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/- ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 21 ವರ್ಷ ವಯೋಮಿತಿಗಳನ್ನು ಮೀರಿರಬಾರದು
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಮಾಸಿಕ ವೇತನ : 22405-1305(1)-23710-1425(2)-26560-1605(5)-34585-1855(2)- 38295-2260(3)-45075-2345(2)-49765-2500(5)-62265
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments