ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ UIIC ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್(UIICL) ನಲ್ಲಿ ಖಾಲಿ ಇರುವ 200 ರಿಸ್ಕ್ ಮ್ಯಾನೇಜ್ಮೆಂಟ್, ಫೈನಾನ್ಸ್ ಅಂಡ್ ಇನ್ವೆಸ್ಟ್ಮೆಂಟ್, ಆಟೋಮೊಬೈಲ್ ಎಂಜಿನೀರ್ಸ್, ಕೆಮಿಕಲ್ ಎಂಜಿನೀರ್ಸ್ / ಮೆಕ್ಯಾಟ್ರೊನಿಕ್ಸ್ ಎಂಜಿನೀರ್ಸ್ ಮತ್ತು ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಕೇಲ್- I) – ಜೆನೆರಾಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ15 ಅಕ್ಟೋಬರ್ 2024 ಹಾಗೂ ಕೊನೆಯ ದಿನಾಂಕ 05 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :200
Risk Management - 10
Finance and Investment - 20
Automobile Engineers - 20
Chemical Engineers / Mechatronics Engineers - 10
Data Analytics - 20
Legal - 20
Administrative Officer (Scale I) – Generalist - 100
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/B.Tech / M.E/ M.Tech / PG/ PGDM ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ, ಹಿಂದುಳಿದ ವರ್ಗದ (2A/2B/3A/3B ಅಭ್ಯರ್ಥಿಗಳಿಗೆ ರೂ 1000/-
* SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/- ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಗಳನ್ನು ಮೀರಿರಬಾರದು
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments