ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ UIIC ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:9 ಜನವರಿ 2024

ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್(UIICL) ನಲ್ಲಿ ಖಾಲಿ ಇರುವ 250 ಅಡ್ಮಿನಿಸ್ಟ್ರೇಟಿವ್ ಆಫೀಸರ್ಸ್ (ಜೆನೆರಲಿಸ್ಟ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಕೊನೆಯ ದಿನಾಂಕ23/01/2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
No. of posts: 250
Application Start Date: 9 ಜನವರಿ 2024
Application End Date: 23 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60/ ಅಂಕಗಳೊಂದಿಗೆ ಪಾಸಾಗಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ, ಹಿಂದುಳಿದ ವರ್ಗದ (2A/2B/3A/3B ಅಭ್ಯರ್ಥಿಗಳಿಗೆ ರೂ 1000/-
* SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/- ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಗಳನ್ನು ಮೀರಿರಬಾರದು
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments