ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಮುಖ್ಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12-ಫೆಬ್ರುವರಿ-2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದಾದ್ಯಂತ ಬ್ಯಾಂಕ್‌ನ ಯಾವುದೇ ಶಾಖೆ/ಕಚೇರಿಯಲ್ಲಿ ಕೆಲಸ ಮಾಡಲು ಸಿದ್ಧರಿರುವವರು ಅರ್ಜಿ ಸಲ್ಲಿಸಬೇಕಾಗುತ್ತದೆ.
ಹುದ್ದೆಗಳ ವಿವರ : 42
ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟಂಟ್) - 03
ಹಿರಿಯ ವ್ಯವಸ್ಥಾಪಕರು (ಕ್ರೆಡಿಟ್ ಆಫಿಸರ್) - 34
ವ್ಯವಸ್ಥಾಪಕರು (ಕ್ರೆಡಿಟ್ ಆಫಿಸರ್) - 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ, ಗುಂಪುಚರ್ಚೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದಲ್ಲಿ ವಯಕ್ತಿಕ ಸಂದರ್ಶನದ ನಡೆಸುವದರ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBA/ MS/ CA/ CMA/ B.E/ B. Tech/ CFA ಯಾವುದೇ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 850 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
SC/ST/PWBD ಅಭ್ಯರ್ಥಿಗಳಿಗೆ ರೂ. 150 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 22 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
SC / ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWBD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ48,170/- ರೂ ಗಳಿಂದ 89,890/- ರೂ ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments