ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟದಲ್ಲಿ ಖಾಲಿ ಇರುವ ಸಹಾಯಕ ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 04/02/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು 1:5 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವದರ ಮೂಲಕ ಸಹಾಯಕ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಕನಿಷ್ಠ 50% (ಪ್ರತಿಶತದೊಂದಿಗೆ) ಉತ್ತೀರ್ಣರಾಗಿರಬೇಕು ಹಾಗೂ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 600/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
2A /2B /3A /3B ವರ್ಗದ ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC /ST ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಠ 48 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತೋಟಗಾರಿಕೆ ವಿಜ್ಞಾಗಳ ವಿಶ್ವವಿದ್ಯಾಲಯದ ನಿಯಮಾನುಸಾರದಂತೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments