ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 1255 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) (UPSC)ದಲ್ಲಿ ಖಾಲಿ ಇರುವ ಭಾರತೀಯ ಅರಣ್ಯ ಸೇವೆ, ನಾಗರಿಕ ಸೇವೆಗಳ ಪರೀಕ್ಷೆಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 1255 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು21/02/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಹುದ್ದೆಗಳ ವಿವರ : 1255
ನಾಗರಿಕ ಸೇವೆಗಳ ಪರೀಕ್ಷೆ - 1105
ಭಾರತೀಯ ಅರಣ್ಯ ಸೇವೆ ಪರೀಕ್ಷೆ - 150
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST/ಮಹಿಳೆ/PwBD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 01-08-2023 ಕ್ಕೆ ಅನುಗುಣವಾಗುವಂತೆ ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗದ ನಿಯಮಾನುಸಾರವಾಗಿ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments