ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 160 ಹಿರಿಯ ಕೃಷಿಕ ಇಂಜಿನಿಯರ್, ಸಹಾಯಕ ನಿರ್ದೇಶಕ, ಜೂನಿಯರ್ ಟೈಮ್ ಸ್ಕೇಲ್, ಪ್ರಾಧ್ಯಾಪಕ ಮತ್ತು ಕೃಷಿ ಅಭಿಯಂತರರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 01/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments