ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ, ಮಾನವಶಾಸ್ತ್ರಜ್ಞ, ವಿಜ್ಞಾನಿ ಬಿ ಮತ್ತು ಪುನರ್ವಸತಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
* ಮಾನವಶಾಸ್ತ್ರಜ್ಞ : 1
* ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ : 4
* ವಿಜ್ಞಾನಿ ಬಿ (ಬ್ಯಾಲಿಸ್ಟಿಕ್ಸ್) :1
* ವಿಜ್ಞಾನಿ ಬಿ (ಫೊರೆನ್ಸಿಕ್ ಎಲೆಕ್ಟ್ರಾನಿಕ್ಸ್) : 3
* ವಿಜ್ಞಾನಿ ಬಿ (ಫರೆನ್ಸಿಕ್ ಸೈಕಾಲಜಿ) : 3
* ಪುನರ್ವಸತಿ ಅಧಿಕಾರಿ : 4
* ಉಪ ಮಹಾನಿರ್ದೇಶಕರು/ಪ್ರಾದೇಶಿಕ ನಿರ್ದೇಶಕರು : 3
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿ ಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 7 ನೇ ವೇತನ ಶ್ರೇಣಿ ಅನ್ವಯ 7 , 8 , 10 , 11 , 12 ನೇ ಹಂತದ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments