ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 19 ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 19
ಆರ್ಕೈವಿಸ್ಟ್ (ಜನರಲ್) : 13
ಸ್ಪೆಷಲಿಸ್ಟ್ ಗ್ರೇಡ್ (ಪೀಡಿಯಾಟ್ರಿಷಿಯನ್) : 5
ಸೈ೦ಟಿಸ್ಟ್ ಬಿ (ನ್ಯೂಟ್ರಾನ್ ಆಕ್ಟಿವೇಷನ್ ಅನಲಾಸಿಸ್) : 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ MBBS/ ಸ್ನಾತಕೋತ್ತರ ಪದವಿ (ಇತಿಹಾಸ)/ ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದಿರಬೇಕಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 25/- ರೂ ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿಕೊಂಡು ಪಾವತಿಸಬಹುದಾಗಿದೆ.
SC/ ST/ ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ವಯಸ್ಸು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗವು ಹುದ್ದೆಗೆ ಅನುಗುಣವಾಗಿ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments