Loading..!

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:22 ಸೆಪ್ಟೆಂಬರ್ 2023
not found

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ ಮತ್ತು ಕೇಂದ್ರ ಅಂತರ್ಜಲ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು 56 ಜಿಯೋಲಾಜಿಸ್ಟ್, ಜಿಯೋಲಾಜಿಸ್ಟ್ಕೆಮಿಸ್ಟ್ ಮತ್ತು ಸೈಂಟಿಸ್ಟ್ - ಬಿ (ಹೈಡ್ರಾಲಜಿ/ ಕೆಮಿಕಲ್/ ಜಿಯೋಫಿಸಿಕ್ಸ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10-10-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.


ಹುದ್ದೆಗಳ ವಿವರ : 56
ಜಿಯೋಲಾಜಿಸ್ಟ್ - 34 
ಜಿಯೋಫಿಸಿಸ್ಟ್ - 01 
ಕೆಮಿಸ್ಟ್ - 13 
ಸೈಂಟಿಸ್ಟ್ - ಬಿ (ಹೈಡ್ರಾಲಜಿ / ಕೆಮಿಕಲ್ / ಜಿಯೋಫಿಸಿಕ್ಸ್) - 08

No. of posts:  56
Application Start Date:  22 ಸೆಪ್ಟೆಂಬರ್ 2023
Application End Date:  10 ಅಕ್ಟೋಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ M.SC/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.  
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments