ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) (UPSC)ನಲ್ಲಿಡೆಪ್ಯೂಟಿ ಕಮಿಷನರ್, ಅಸಿಸ್ಟೆಂಟ್ ಡೈರೆಕ್ಟರ್, ರಬ್ಬರ್ ಪ್ರೊಡಕ್ಷನ್ ಕಮಿಷನರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 02/02/2023 ರೊಳಗೆ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 111
ಡೆಪ್ಯೂಟಿ ಕಮಿಷನರ್ - 01
ಅಸಿಸ್ಟೆಂಟ್ ಡೈರೆಕ್ಟರ್ - 01
ರಬ್ಬರ್ ಪ್ರೊಡಕ್ಷನ್ ಕಮಿಷನರ್ - 01
ಸೈ೦ಟಿಸ್ಟ್ 'ಬಿ' - 01
ಸೈ೦ಟಿಫಿಕ್ ಆಫೀಸರ್ - 01
ಮೀನುಗಾರಿಕೆ - 01
ಟೆಕ್ನಿಕಲ್ ಅಸಿಸ್ಟೆಂಟ್ ಡೈರೆಕ್ಟರ್ - 06
ಜೆನರಲ್ ಅಸಿಸ್ಟಂಟ್ ಡೈರೆಕ್ಟರ್ - 04
ಸೈ೦ಟಿಸ್ಟ್ 'ಬಿ' - 01
ಸೈ೦ಟಿಸ್ಟ್ 'ಬಿ' ಸಿವಿಲ್ ಇಂಜಿನಿಯರಿಂಗ್ - 09
ಜೂನಿಯರ್ ಟ್ರಾನ್ಸ್ ಲೇಷನ್ - 76
ಡೆಪ್ಯೂಟಿ ಲೆಜಿಸ್ಲೇಟಿವ್ ಕೌನ್ಸಿಲ್ - 03
ಅಸಿಸ್ಟೆಂಟ್ ಇಂಜಿನಿಯರಿಂಗ್ - 04
ಸೀನಿಯರ್ ಸೈನ್ಟಿಫಿಕ್ ಆಫೀಸರ್ - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
* ಅರ್ಜಿ ಶುಲ್ಕವಾಗಿ ರೂ.25/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments