Loading..!

ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:5 ಸೆಪ್ಟೆಂಬರ್ 2024
not found

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 85 ಗ್ರೂಪ್-A ಮತ್ತು ಗ್ರೂಪ್-B ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಗ್ರೂಪ್-A ಮತ್ತು ಗ್ರೂಪ್-B ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  85
Application Start Date:  5 ಸೆಪ್ಟೆಂಬರ್ 2024
Application End Date:  24 ಸೆಪ್ಟೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 


ಹುದ್ದೆಗಳ ವಿವರ : 85
1. Geologist, Group A : 16
2. Geophysicist, Group A : 06
3. Chemist. Group A : 02
4. Scientist ‘B’(Hydrogeology), Group ‘A’ : 13
5. Scientist ‘B’(Chemical ) Group ‘A’ : 01
6. Scientist ‘B’(Geophysics) Group ‘A’ : 01
7. Assistant Hydrogeologist, Group ‘B’ : 31
8. Assistant Chemist, Group ‘B’ : 04
9. Assistant Geophysicist, Group ‘B’ : 11

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee: * ಅರ್ಜಿ ಶುಲ್ಕವಾಗಿ ರೂ.25/- ಪಾವತಿಸಬೇಕು. 
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
Age Limit:

ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ,ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 32 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments