ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು2,253 ನರ್ಸಿಂಗ್ ಅಧಿಕಾರಿ ಮತ್ತು ಆಪ್ತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ07/03/2024 ರಿಂದ ಪ್ರಾರಂಭಗೊಂಡು ದಿನಾಂಕ 27/03/2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 2,253
ನರ್ಸಿಂಗ್ ಅಧಿಕಾರಿ : 1930
ಆಪ್ತ ಸಹಾಯಕ : 323
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments