ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 76 ಅಸಿಸ್ಟೆಂಟ್ ಡೈರೆಕ್ಟರ್, ಸ್ಪೆಷಲಿಸ್ಟ್ ಗ್ರೇಡ್ III , ಅಸಿಸ್ಟೆಂಟ್ ಕಾಸ್ಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಎಕ್ಸಿ ಕ್ಯುಟಿವ್ ಇಂಜಿನಿಯರ್ (ಸಿವಿಲ್) ಮತ್ತು ಸ್ಪೆಷಲಿಸ್ಟ್ ಗ್ರೇಡ್ III (ಸೈಕಿಯಾಟ್ರಿ) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ 24/02/2024 ಹಾಗೂ ಕೊನೆಯ ದಿನಾಂಕ 14/ಮಾರ್ಚ್/2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 76
Assistant Director (Cost) -36
Specialist Grade III(Cardio Vascular & Thoracic Surgery) - 03
Specialist Grade III (Endocrinology) - 02
Assistant Cost Accounts Officer - 07
Assistant Executive Engineer (Civil) - 01
Specialist Grade III (Medical Gastroenterology) -01
Specialist Grade III (Paediatrics) - 17
Specialist Grade III (Psychiatry) - 09
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ MBBS/ B.com/ Engineering ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments