ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 109 ಸೈಂಟಿಸ್ಟ್-B (ನೋನ್ ಡಿಸ್ಟ್ರಕ್ಟಿವ್), ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ‘B’ (ಕೆಮಿಸ್ಟ್ರಿ), ರಿಸರ್ಚ್ ಆಫೀಸರ್ (ಕೆಮಿಸ್ಟ್ರಿ), ಅಸಿಸ್ಟೆಂಟ್ ಕೆಮಿಸ್ಟ್ ಮತ್ತು ಇನ್ವೆಸ್ಟಿಗೇಟೀವ್ ಗ್ರೇಡ್-I ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ 13/ ಏಪ್ರಿಲ್ /2024 ಹಾಗೂ ಕೊನೆಯ ದಿನಾಂಕ 02/ ಮೇ /2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 109
Scientist-B (Non Destructive) - 02
Specialist Grade III Assistant Professor (Nephrology) - 08
Specialist Grade III Assistant Professor (Nuclear Medicine) - 03
Specialist Grade III Assistant Professor (Orthopaedics) - 10
Specialist Grade III Assistant Professor (Paediatric Cardiology) - 01
Specialist Grade III Assistant Professor (Paediatric Surgery) - 09
Specialist Grade III
Assistant Professor (Plastic and Reconstructive Surgery - 03
Specialist Grade III Assistant Professor (Surgical Oncology) - 02
Specialist Grade III Assistant Professor (Urology) - 04
Research Officer (Chemistry) - 01
Scientist ‘B’ (Chemistry) - 01
Scientist ‘B’ (Physics) - 01
Investigator Grade-I - 02
Assistant Chemist - 03
Nautical Surveyor-cum Deputy Director General (Technical) - 06
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.E./B.Tech / MBBS ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments