ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಬಳ್ಳಾರಿ, ಒಟ್ಟು 130 ಹುದ್ದೆಗಳ ನೇಮಕಾತಿ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಬಳ್ಳಾರಿ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ದಿನಾಂಕ 10 ಜನೆವರಿ 2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣ, ಬಳ್ಳಾರಿ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು SSLC PUC ತಾಂತ್ರಿಕ ಡಿಪ್ಲೋಮಾ, BSc Nursing ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ಪೂರೈಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35ವರ್ಷ
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಕಾರ್ಮಿಕ ಕಾಯ್ದೆನ್ವಯ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments