ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರಿಯ ವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ಪ್ರಾಥಮಿಕ ಶಿಕ್ಷಕರು, ವಿಶೇಷ ಶಿಕ್ಷಣ ತಜ್ಞೆ, PGT ಗಳು ಮತ್ತು TGT ಗಳು ಸೇರಿದಂತೆ ವಿವಿಧ ಹುದ್ದೆಗಳ ಅರೆಕಾಲಿಕ ಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 08/07/2024 ರಂದು ಬೆಳಿಗ್ಗೆ 08:00 ಗಂಟೆಯಿಂದ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಕೇಂದ್ರೀಯ ವಿದ್ಯಾಲಯ, ಅಫ್ಘಾಲ್ ಪುರ್ ಟಕ್ಕೆ ಹತ್ತಿರ,
ತೋರ್ವಿ ರಸ್ತೆ ವಿಜಯಪುರ-586102.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments