ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಫೆಬ್ರುವರಿ 2024

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು93 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 05-03-2024 ಸಂಜೆ 5.30 ಗಂಟೆಯೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Vijayapur City Corporation, Bagalkot Road,
Jalanagar-586109, Vijayapur, Karnataka
No. of posts: 93
Application Start Date: 7 ಫೆಬ್ರುವರಿ 2024
Application End Date: 5 ಮಾರ್ಚ್ 2024
Work Location: ವಿಜಯಪುರ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೃತ್ತಿ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಮಹಾನಗರಪಾಲಿಕೆಗಳಲ್ಲಿ ಹಾಲಿ ನೇರಪಾವತಿ/ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 /- ರಿಂದ 28,950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments