ವಿಜಯಪುರ ಜಿಲ್ಲೆಯ ಮಹಿಳಾ ಸಹಕಾರಿ ಬ್ಯಾಂಕನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ SSLC/ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿ ಇರುವ ಕಂಪ್ಯೂಟರ್ ನಿರ್ವಾಹಕರು, ಕಿರಿಯ ಸಹಾಯಕರು, ಸಿಪಾಯಿ ಮತ್ತು ವಾಹನ ಚಾಲಕ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ04/10/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 05
ಕಂಪ್ಯೂಟರ್ ನಿರ್ವಾಹಕರು : 01
ಕಿರಿಯ ಸಹಾಯಕರು : 02
ಸಿಪಾಯಿ ಮತ್ತು ವಾಹನ ಚಾಲಕ : 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು S.S.L.C/ BCA/ B.Com/ B.Sc/ BE/BBA/ MSW/ಪದವಿ/ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/- ರೂ.
- SC/ST/PWD ಅಭ್ಯರ್ಥಿಗಳು 300/- ರೂ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 37,900- 58,250/- ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments