ವಿಜಯಪುರದ ಖಾಸಗಿ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ವಿಜಯಪುರ ಜಿಲ್ಲೆಯ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಸವನಬಾಗೇವಾಡಿಯಲ್ಲಿ ಖಾಲಿ ಇರುವ 08 ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್/ ಸಿಪಾಯಿ ಮತ್ತು ಕಾವಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/10/2023 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 08
ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ - 03
ಸಿಪಾಯಿ/ ಕಾವಲುಗಾರ - 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆB.COM / M.COM / BCA/ MCA/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಹಾಗೂ
ಸಿಪಾಯಿ/ ಕಾವಲುಗಾರ ಹುದ್ದೆಗಳಿಗೆ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
- ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕ ಹಾಗೂ SC/ST ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಪಾವತಿಸಬೇಕು.
- ಸಿಪಾಯಿ/ ಕಾವಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಹಾಗೂ SC/ST ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
ಪರಿಶಿಷ್ಟ ಜಾತಿ. ಪರಿಶಿಷ್ಟ ಪಂಗಡ ಅಭ್ಯರ್ಥಿಗಳು : 40 ವರ್ಷ
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು : 38 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ 27,650/- ರೂಗಳಿಂದ 52,650/- ರೂ ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments