ವಿಜಯಪುರ ರಾಷ್ಟೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Published by: Hanamant Katteppanavar | Date:16 ಜನವರಿ 2021

ರಾಷ್ಟೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯ, ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್ ಮತ್ತು ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲೆಗಳೊಂದಿಗೆ ದಿನಾಂಕ 18 ಜನವರಿ 2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ಇಂಗ್ಲಿಷ್ ಮತ್ತು ಕನ್ನಡ ಭಾಷೆ ಮಾತನಾಡಲು ಮತ್ತು ಬರೆಯಲು ಗೊತ್ತಿರಬೇಕು.
* ಹುದ್ದೆಗಳ ವಿವರ :
- ಮೆಡಿಕಲ್ ಆಫೀಸರ್ಸ್ - 02 ಹುದ್ದೆಗಳು
- ಜಿಲ್ಲಾ ಕಾರ್ಯಕ್ರಮ ಸಂಯೋಜಕರ - 01 ಹುದ್ದೆ
No. of posts: 3
Application End Date: 18 ಜನವರಿ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, ಎಂಬಿಎ, ಎಂಬಿಬಿಎಸ್, ಸಾರ್ವಜನಿಕ ಆರೋಗ್ಯದಲ್ಲಿ - ಎಂಡಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
* ನೇರ ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾ ಭವನ, ವಿಜಯಪುರ
* ಆಸಕ್ತ ಅಭ್ಯರ್ಥಿಗಳು ದಿನಾಂಕ -18 ಜನವರಿ 2021 ರಂದು ಎಲ್ಲಾ ಮೂಲ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments