ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 113 ಗ್ರೂಪ್ ಸಿ (ಶುಶ್ರೋಷಾಧಿಕಾರಿ) ಹುದ್ದೆಗಳ ನೇರ ನೇಮಕಾತಿ

ಬಳ್ಳಾರಿಯಲ್ಲಿರುವ ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಖಾಲಿ ಇರುವ 113 Group-C (ಶುಶ್ರೋಷಾಧಿಕಾರಿ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 25/07/2022 ದಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ
ಸಂದರ್ಶನ ನಡೆಯುವ ಸ್ಥಳ:
ವಿಮ್ಸ್ ಆಡಳಿತ ಕಚೇರಿ ಬಳ್ಳಾರಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಕಾರ್ಮಿಕರ ಕಾಯ್ದೆಅನ್ವಯವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments