ವಿಶ್ವ ಭಾರತಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 709 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ವಿಶ್ವ ಭಾರತಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ರಿಜಿಸ್ಟ್ರಾರ್ ಫೈನಾನ್ಸ್ ಆಫೀಸರ್, ಲೈಬ್ರರಿಯನ್, ಡೆಪ್ಯುಟಿ ರಿಜಿಸ್ಟ್ರಾರ್ ಹಾಗೂ ಇಂಟರ್ನಲ್ ಆಡಿಟ್ ಆಫೀಸರ್ ಹುದ್ದೆಗಳು ಸೇರಿದಂತೆ ಒಟ್ಟು 709 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಲಿಖಿತ ಪರೀಕ್ಷೆ- ಕೌಶಲ್ಯ ಪರೀಕ್ಷೆ- ಪ್ರಾಯೋಗಿಕ/ವ್ಯಾಪಾರ ಪರೀಕ್ಷೆ- ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC/ Degree/ Pg/ P.hd ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳೀಗೆ ಅನುಗುಣವಾಗುವಂತೆ ಗರಿಷ್ಠ 57 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಶ್ವ ಭಾರತಿ ವಿಶ್ವವಿದ್ಯಾಲಯದ ನಿಯಮಾನುಸಾರವಾಗಿ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments