ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ವಿಜಿಯನಗರಂ ನಲ್ಲಿ ಖಾಲಿ ಇರುವ 58 ಸಹಾಯಕ ವ್ಯೆವಸ್ಥಾಪಕ, ಸಿಬ್ಬಂದಿ ಸಹಾಯಕ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 58
ಸಹಾಯಕ ವ್ಯೆವಸ್ಥಾಪಕ : 20
ಸಿಬ್ಬಂದಿ ಸಹಾಯಕ : 32
ಮ್ಯಾನೇಜರ್ : 6
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,900/- ರಿಂದ 63,840/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments