ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಮುಖ್ಯ ಆವರಣ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ನಂದಿಹಳ್ಳಿ (ಸಂಡೂರು ತಾಲ್ಲೂಕು), ಹಾಗೂ ಯಲಬುರ್ಗಾದಲ್ಲಿರುವ ವಿವಿಧ ಸ್ನಾತಕ ವಿಭಾಗಗಳಲ್ಲಿ ಅಗತ್ಯತೆಗನುಸಾರವಾಗಿ ಬೋಧನಾಕಾರ್ಯದ ನಿರ್ವಹಣೆಗಾಗಿ UGC ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ 2024-25 ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರು, ಗ್ರಂಥಾಲಯ ವಿಭಾಗಗಳಲ್ಲಿ ಸಹಾಯಕ ಗ್ರಂಥಪಾಲಕರು ಹಾಗೂ ಕ್ರೀಡಾ ಮತ್ತು ದೈಹಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಕ್ರೀಡಾ ನಿರ್ದೇಶಕರು, CEMARF ಅತಿಥಿ ಉಪನ್ಯಾಸಕರು/ತಾಂತ್ರಿಕ ಸಹಾಯಕರು ಹುದ್ದೆಗಳಿಗಾಗಿ ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 05 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು & ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- OBC ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500/-
- ಅಭ್ಯರ್ಥಿಗಳು ಎಸ್‍ಸಿ/ ಎಸ್‍ಟಿ/ ಮಾಜಿ ಸೈನಿಕ/ ಮಹಿಳೆಯರು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಚಲನ್/ಡಿಮಾಂಡ್ ಡ್ರಾಫ್ಟ್
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ನೇಮಕಾತಿಯ ನಿಯಮಾನುಸಾರವಾಗಿ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments