Loading..!

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:16 ನವೆಂಬರ್ 2021
not found

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಗಣಕಯಂತ್ರ ವಿಜ್ಞಾನ ಮತ್ತು ಅಭಿಯಾಂತ್ರಿಕ ವಿಭಾಗದ ಬೆಳಗಾವಿ, ಕಲಬುರ್ಗಿ, ಮೈಸೂರು ಮತ್ತು ಮುದ್ದೇನಹಳ್ಳಿ ಕೇಂದ್ರಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ 21 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಿಕೋಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು guestfacultycse2021@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ದಿನಾಂಕ : 10-11-2021 ರಿಂದ 16-11-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಪ್ರಮಾಣ ಪತ್ರ ಮತ್ತು ಮೀಸಲಾತಿಗೆ ಸಂಬಂಧಪಟ್ಟ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ 16-11-2021 ರ ಸಂಜೆ 5:00 ಗಂಟೆಯೊಳಗೆ ಈ ಕೆಳಗಿನ ಕಛೇರಿ ವಿಳಾಸಕ್ಕೆ ಅಂಚೆಯ ಮೂಲಕ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.


ಕಛೇರಿ ವಿಳಾಸ :
ಗಣಕಯಂತ್ರ ವಿಜ್ಞಾನ ಮತ್ತು ಅಭಿಯಾಂತ್ರಿಕ ವಿಭಾಗದ 
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ

No. of posts:  21
Application Start Date:  10 ನವೆಂಬರ್ 2021
Application End Date:  16 ನವೆಂಬರ್ 2021
Last Date for Payment:  16 ನವೆಂಬರ್ 2021
Work Location:  Karnataka
Selection Procedure: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್, ಎಂಸಿಎ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, OBC ಗೆ ಸೇರಿದ ಅಭ್ಯರ್ಥಿಗಳು ರೂ500/- ಮತ್ತು 
SC, ST, Cat-1ರ ಅಭ್ಯರ್ಥಿಗಳು ರೂ250/- ಅರ್ಜಿ ಶುಲ್ಕವನ್ನು NEFT /RTGS ಮೂಲಕ ಪಾವತಿಸಬೇಕಿರುತ್ತದೆ.

Age Limit:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ25,000/- ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments

Rajug Raj ನವೆಂ. 16, 2021, 10:16 ಪೂರ್ವಾಹ್ನ